ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ಸೋಮವಾರ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.
ಬೇರೆ ಬೇರೆ ಆಯಾಮಗಳಲ್ಲಿ ಸಿಎಎ ಅನ್ನು ವಿರೋಧಿಸಿ ಒಟ್ಟು 200 ಅರ್ಜಿಗಳು ಸಲ್ಲಿಕೆಯಾಗಿವೆ. ಎಲ್ಲಾ ಅರ್ಜಿಗಳನ್ನು ಒಂದೇ ನೆಲೆಯಲ್ಲಿ ವಿಚಾರಣೆ ನಡೆಸುವುದು ಕಷ್ಟವಾಗಲಿದೆ. ಆದ್ದರಿಂದ ಈ ಎಲ್ಲಾ ಅರ್ಜಿಗಳನ್ನು ವಿಷಯಾಧಾರಿತವಾಗಿ ಬೇರ್ಪಡಿಸಬೇಕು ಎಂದು ವಿವಿಧ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೊರ್ಟ್‌ಗೆ ಮನವಿ ಮಾಡಿದರು.
ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಯು.ಯು.ಲಿಲಿತ್ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು, ಅರ್ಜಿಗಳನ್ನು ವಿಷಯಾಧಾರಿಕವಾಗಿ ಬೇರ್ಪಡಿಸಲು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿತು. ಈ ರೀತಿ ವಿಷಯಾಧಾರಿತವಾಗಿ ಬೇರ್ಪಡಿಸಿದ ಅರ್ಜಿಗಳಿಗೆ ಕೇಂದ್ರವು ಪ್ರತಿಕ್ರಿಯಿಸಬೇಕು ಎಂದು ಹೇಳಿತು.
ಈ ಪ್ರಕರಣವನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಬಹುದು ಎಂದೂ ಸೂಚಿಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ನಿಗದಿಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.