ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯಜನರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿಶೇ 10ರಷ್ಟು ಮೀಸಲಾತಿ ನೀಡಲು ಪ್ರಧಾನಿ ಮೋದಿ ನೇತೃತ್ವದಸಚಿವ ಸಂಪುಟ ಸೋಮವಾರ ಸಮ್ಮತಿಸಿದೆ.
ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದೀಗ ಕೇಂದ್ರ ಸರ್ಕಾರ ಮೇಲ್ಜಾತಿಯ ಜನರಿಗೆ ಸರ್ಕಾರಿ ಕೆಲಸಗಳಲ್ಲಿ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದೆ. ವಾರ್ಷಿಕ ₹8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರು ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ.
ಸಂವಿಧಾನದ ಅನುಚ್ಛೇದ 15 ಮತ್ತು 16ರಲ್ಲಿ ತಿದ್ದುಪಡಿಗೆ ಸಂಸತ್ತಿನಲ್ಲಿ ಮಸೂದೆ ಅಂಗೀಕೃತಗೊಳ್ಳಬೇಕಾಗುತ್ತದೆ. ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ಮಿತಿಯನ್ನು ಸುಪ್ರೀಂ ಕೋರ್ಟ್ ಗರಿಷ್ಠ ಶೇ 50ಕ್ಕೆ ನಿಗದಿ ಪಡಿಸಿದೆ.
ವರದಿಗಳ ಪ್ರಕಾರ, ಸರ್ಕಾರಸಂಸತ್ ಅಧಿವೇಶನದ ಕೊನೆಯ ದಿನವಾದ ಮಂಗಳವಾರ ಮಸೂದೆಯನ್ನು ಪ್ರಸ್ತುತ ಪಡಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.