ADVERTISEMENT

ಮರಾಠಿ, ಬಂಗಾಳಿ ಸೇರಿದಂತೆ ಐದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ

ಪಿಟಿಐ
Published 3 ಅಕ್ಟೋಬರ್ 2024, 15:46 IST
Last Updated 3 ಅಕ್ಟೋಬರ್ 2024, 15:46 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ನವದೆಹಲಿ: ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಇಂದು (ಗುರುವಾರ) ಒಪ್ಪಿಗೆ ನೀಡಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸೇರಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

'ಇದೊಂದು ಚಾರಿತ್ರಿಕ ನಿರ್ಧಾರವಾಗಿದೆ. ನಮ್ಮ ಸಂಸ್ಕೃತಿ, ಭಾಷೆಗಳು ಹೊಂದಿರುವ ಶ್ರೀಮಂತ ಪರಂಪರೆಯ ಬಗ್ಗೆ ಮೋದಿ ಸರ್ಕಾರಕ್ಕೆ ಹೆಮ್ಮೆ ಇದೆ' ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

2004ರ ಅಕ್ಟೋಬರ್ 12ರಂದು ಶಾಸ್ತ್ರೀಯ ಭಾಷೆ ಸ್ಥಾನವನ್ನು ನೀಡಲು ಭಾರತ ಸರ್ಕಾರವು ನಿರ್ಧರಿಸಿತ್ತು.

ಮೊದಲನೇಯದಾಗಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಲಾಗಿತ್ತು. ಬಳಿಕ ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾ ಭಾಷೆಗಳೂ ಶಾಸ್ತ್ರೀಯ ಸ್ಥಾನಮಾವನ್ನು ಪಡೆದಿವೆ.

ಮಹಾರಾಷ್ಟ್ರದಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವಂತೆಯೇ ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವುದು ರಾಜಕೀಯ ದೃಷ್ಟಿಕೋನದಲ್ಲಿ ಗಮನಾರ್ಹ ಬೆಳವಣಿಗೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.