ನವದೆಹಲಿ (ಪಿಟಿಐ): ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಅಡಿಯಲ್ಲಿ 75 ಲಕ್ಷ ಎಲ್‌ಪಿಜಿ ಸಂಪರ್ಕ ಒದಗಿಸುವ ಸಲುವಾಗಿ ತೈಲ ಮಾರುಕಟ್ಟೆ ಕಂಪನಿಗಳಿಗೆ ₹1,650 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
75 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕ ನೀಡುವುದರಿಂದ ಪಿಎಂಯುವೈ ಯೋಜನೆಯ ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ.
ಬಡತನ ರೇಖೆಗಿಂತ ಕೆಳಗೆ ಇರುವ (ಬಿಪಿಎಲ್) ಕುಟುಂಬಗಳ ಮಹಿಳೆಯರಿಗೆ ಎಲ್‌ಪಿಜಿ ಸಂಪರ್ಕ ನೀಡುವ ಪಿಎಂಯುವೈ ಯೋಜನೆಗೆ 2016 ಮೇ ತಿಂಗಳಲ್ಲಿ ಮೋದಿ ಅವರು ಚಾಲನೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.