ನವದೆಹಲಿ:ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ (ಎನ್‌ಸಿಎಸ್‌ಕೆ) ಅಧಿಕಾರಾವಧಿಯನ್ನು 2025ರ ಮಾರ್ಚ್ 31ರ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿತು.
‘ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಆಯೋಗದ ಅಧಿಕಾರಾವಧಿಯನ್ನು ಮೂರು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ಕೈಗೊಂಡಿತು’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
1994ರ ಆಗಸ್ಟ್ 12ರಂದು ಆಯೋಗವನ್ನು ರಚಿಸಲಾಯಿತು. ಕಾಲಕಾಲಕ್ಕೆ ಆಯೋಗದ ಅಧಿಕಾರಾವಧಿಯನ್ನು ವಿಸ್ತರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.