ಕೋಲ್ಕತ್ತ: ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 36 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಿ ಕಲ್ಕತ್ತ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
ಮೂರು ತಿಂಗಳೊಳಗೆ ಹೊಸ ನೇಮಕಾತಿ ನಡೆಸುವಂತೆ ರಾಜ್ಯ ಪ್ರಾಥಮಿಕ ಶಿಕ್ಷಣ ಮಂಡಳಿಗೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಆದೇಶಿಸಿದ್ದಾರೆ.
2014ರಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಇದರಡಿ ಆಯ್ಕೆಯಾದವರಿಗೆ 2016ರಲ್ಲಿ ನೇಮಕಾತಿಯ ಆದೇಶ ಪತ್ರ ನೀಡಲಾಗಿತ್ತು. ಒಟ್ಟು 42,500 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದ್ದು, ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.