ADVERTISEMENT

ನಾರದ ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದ ಹೈಕೋರ್ಟ್‌

ಏಜೆನ್ಸೀಸ್
Published 27 ಮೇ 2021, 12:42 IST
Last Updated 27 ಮೇ 2021, 12:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೋಲ್ಕತ್ತ: ನಾರದ ಪ್ರಕರಣದ ವಿಚಾರಣೆಯನ್ನು ಕೋಲ್ಕತ್ತ ಹೈಕೋರ್ಟ್‌ ಮೇ 28ಕ್ಕೆ ಮುಂದೂಡಿದೆ. ಹೈಕೋರ್ಟ್‌ನ ಐವರು ಸದಸ್ಯರ ನ್ಯಾಯಪೀಠವು ಈ ವಿಚಾರಣೆಯನ್ನು ನಡೆಸುತ್ತಿದೆ.

ನಾರದ ಮಾರುವೇಷ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್‌ನ ಮೂವರು ಹಿರಿಯ ನಾಯಕರು ಮತ್ತು ಸಚಿವರು ಮೇ 17ರಂದು ಸಿಬಿಐನಿಂದ ಬಂಧಿಸಲ್ಪಟ್ಟಿದ್ದರು. ಬಂಧನದ ನಂತರ ಜೈಲಿನಲ್ಲಿದ್ದ ನಾಲ್ವರು ಮುಖಂಡರನ್ನು ಗೃಹಬಂಧನದಲ್ಲಿ ಇರಿಸಬೇಕೆಂದು ಮೇ 21ರಂದು ಕೋಲ್ಕತ್ತ ಹೈಕೋರ್ಟ್‌ ಆದೇಶಿಸಿತ್ತು.

ಸಿಬಿಐನಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಫಿರ್ಹಾದ್‌ ಹಕೀಮ್‌, ಪಂಚಾಯತ್‌ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್‌ ಮಿತ್ರಾ ಮತ್ತು ಟಿಎಂಸಿಯ ಮಾಜಿ ಮುಖಂಡ ಸೋವನ್‌ ಚಟರ್ಜಿ ಅವರನ್ನು ಸದ್ಯ ಗೃಹಬಂಧನದಲ್ಲಿ ಇರಿಸಲಾಗಿದೆ.

ADVERTISEMENT

ಹೈಕೋರ್ಟ್‌ನ ಗೃಹಬಂಧನದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಳ್ಳಲು ಸಿಬಿಐಗೆ ಸುಪ್ರೀಂ ಕೋರ್ಟ್‌ ಮೇ 25ರಂದು ಅವಕಾಶ ನೀಡಿದೆ.

ಸಿಬಿಐ ಪರ ವಾದಿಸುತ್ತಿರುವ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಅರ್ಜಿ ಹಿಂಪಡೆಯಲು ಮತ್ತು ಹೈಕೋರ್ಟ್‌ನಲ್ಲಿ ಎಲ್ಲ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.