ADVERTISEMENT

ಕೋವಿಡ್ ನಿಯಮಾವಳಿ ಉಲ್ಲಂಘನೆ: ನಟ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಪ್ರಕರಣ

ಪಿಟಿಐ
Published 8 ಆಗಸ್ಟ್ 2021, 8:15 IST
Last Updated 8 ಆಗಸ್ಟ್ 2021, 8:15 IST
ನಟ ಮಮ್ಮುಟ್ಟಿ (ಚಿತ್ರ: ಫೇಸ್‌ಬುಕ್/Mammootty)
ನಟ ಮಮ್ಮುಟ್ಟಿ (ಚಿತ್ರ: ಫೇಸ್‌ಬುಕ್/Mammootty)   

ಕೋಯಿಕ್ಕೋಡ್: ಇಲ್ಲಿಗೆ ಸಮೀಪದ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆ ಸೇವೆಯ ಉದ್ಘಾಟನೆಗಾಗಿ ಇಬ್ಬರು ನಟರು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಮಾರಂಭದಲ್ಲಿ ಸುಮಾರು 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

'ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಈ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ' ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ADVERTISEMENT

ಉದ್ಘಾಟನಾ ಕಾರ್ಯಕ್ರಮವು ಆಗಸ್ಟ್ 3ರಂದು ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.