ADVERTISEMENT

ಮೋದಿ, ಅಡ್ವಾಣಿ ವಿರುದ್ದ ಅವಹೇಳನಕಾರಿ ಹೇಳಿಕೆ: ಪತ್ರಕರ್ತ ನಿಖಿಲ್ ವಿರುದ್ಧ ದೂರು

ಪಿಟಿಐ
Published 9 ಫೆಬ್ರುವರಿ 2024, 12:58 IST
Last Updated 9 ಫೆಬ್ರುವರಿ 2024, 12:58 IST
<div class="paragraphs"><p>ನಿಖಿಲ್‌ ವಾಗ್ಲೆ</p></div>

ನಿಖಿಲ್‌ ವಾಗ್ಲೆ

   

ಪುಣೆ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರಿಗೆ ಭಾರತರತ್ನ ಘೋಷಣೆ ಮಾಡಿದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಹಿರಿಯ ಪತ್ರಕರ್ತ ನಿಖಿಲ್‌ ವಾಗ್ಲೆ ವಿರುದ್ಧ ದೂರು ದಾಖಲಾಗಿದೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಪುಣೆಯ ಸ್ಥಳೀಯ ಬಿಜೆಪಿ ನಾಯಕ ಸುನಿಲ್‌ ದೇವಧರ್‌ ಅವರು, ನೀಡಿದ ದೂರಿನ ಆಧಾರದಲ್ಲಿ ನಿಖಿಲ್‌ ವಾಗ್ಲೆ ವಿರುದ್ಧ ವಿಶ್ರಮ್‌ಭಾಗ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಘೋಷಣೆಯಾಗಿರುವ ಬಗ್ಗೆ‌ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದ ವಾಗ್ಲೆ ಅವರು, ಮೋದಿ ಮತ್ತು ಅಡ್ವಾಣಿ ಅವರ ವಿರುದ್ಧ ಅವಹೇಳನಕಾರಿಯಾದ ಹೇಳಿಕೆಗಳನ್ನು ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.