ADVERTISEMENT

ಜಾತಿಗಣತಿ: ಸಮಾಜದ ಅಭಿವೃದ್ಧಿಗೆ ಬಳಕೆಯಾಗಲಿ - RSSನ ಸುನೀಲ್ ಅಂಬೇಕರ್

ಪಿಟಿಐ
Published 21 ಡಿಸೆಂಬರ್ 2023, 11:24 IST
Last Updated 21 ಡಿಸೆಂಬರ್ 2023, 11:24 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನಾಗ್ಪುರ: ‘ಸಮಾಜದ ಸಮಗ್ರ ಅಭಿವೃದ್ಧಿಗೆ ಜಾತಿಗಣತಿ ಬಳಕೆಯಾಗಬೇಕು. ಆದರೆ ಅದರಿಂದ ಸಮಾಜದ ಸಾಮರಸ್ಯ ಮತ್ತು ಒಗ್ಗಟ್ಟು ಕದಡದಂತೆ ಎಚ್ಚರವಹಿಸಬೇಕು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಹೇಳಿದೆ.

ಜಾತಿ ಗಣತಿ ವಿರೋಧಿಸಿ ಸಂಘದ ಸದಸ್ಯರೊಬ್ಬರ ಹೇಳಿಕೆ ಹೊರಬಿದ್ದ ಒಂದು ದಿನದ ನಂತರ ಇಂಥದ್ದೊಂದು ಹೇಳಿಕೆಯನ್ನು ಆರ್‌ಎಸ್‌ಎಸ್‌ನ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್‌ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

‘ಯಾವುದೇ ತಾರತಮ್ಯ ಹಾಗೂ ಅಸಮಾನತೆ ಇಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಾಮರಸ್ಯದ ತಳಹದಿಯ ಮೇಲೆ ಹಿಂದೂ ಸಮಾಜವನ್ನು ಕಟ್ಟಲು ಸಂಘವು ನಿರಂತರವಾಗಿ ಶ್ರಮಿಸುತ್ತಿದೆ’ ಎಂದಿದ್ದಾರೆ.

‘ಸಮಾಜದ ಸಮಗ್ರ ಅಭಿವೃದ್ಧಿಗೆ ಜಾತಿಗಣತಿ ಬಳಕೆಯಾಗಬೇಕು. ಇದರಿಂದಾಗಿ ಸಮಾಜದಲ್ಲಿನ ಸಾಮರಸ್ಯ ಹಾಗೂ ಒಗ್ಗಟ್ಟು ಯಾವುದೇ ಕಾರಣಕ್ಕೂ ಹಾಳಾಗದಂತೆ ಎಲ್ಲಾ ಪಕ್ಷಗಳೂ ಖಾತ್ರಿಪಡಿಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.