ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಬಂಧಿಸಿದೆ.
ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಬುಧವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಲು ಅನುಮತಿ ನೀಡಿದ ಬೆನ್ನಲ್ಲೇ, ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ.
ಏತನ್ಮಧ್ಯೆ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.