ನವದೆಹಲಿ: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರೀಬಾಗ್‌ನ ಶಾಲೆಯೊಂದರ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮೇ 5ರಂದು ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಜಾರೀಬಾಗ್ ನಗರದ ಸಮನ್ವಯಾಧಿಕಾರಿಯಾಗಿ ಒಯಾಸಿಸ್ ಶಾಲೆಯ ಪಾಂಶುಪಾಲ ಇಹಸಾನುಲ್ ಹಕ್ ಅವರನ್ನು ನೇಮಿಸಲಾಗಿತ್ತು. ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಹಕ್ ಮತ್ತು ಆಲಂ ಅವರ ವಿಚಾರಣೆ ನಂತರ ಸಿಬಿಐ ಅವರನ್ನು ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತ್ತೈವರನ್ನು ತನಿಖಾ ಸಂಸ್ಥೆ ವಿಚಾರಣೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.