ADVERTISEMENT

ವೀಸಾ ವಂಚನೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಪಿಟಿಐ
Published 4 ಜುಲೈ 2023, 16:28 IST
Last Updated 4 ಜುಲೈ 2023, 16:28 IST
ವೀಸಾ
ವೀಸಾ   

ನವದೆಹಲಿ (ಪಿಟಿಐ): ವೀಸಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಸೇರಿದಂತೆ ನಾಲ್ವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಿಬಿಐ ಇತ್ತೀಚೆಗೆ ದೆಹಲಿ ಮತ್ತು ಪಂಜಾಬ್‌ನಲ್ಲಿ ಆರೋಪಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ  ಕೈಗೊಂಡಿತ್ತು.

ಫ್ರಾನ್ಸ್‌ ರಾಯಭಾರ ಕಚೇರಿಯಲ್ಲಿ ವೀಸಾ ಅರ್ಜಿ ಪರಿಶೀಲನೆ ಸಂದರ್ಭದಲ್ಲಿ ವಂಚನೆ ಪತ್ತೆಯಾಗಿತ್ತು. ಬೇರೆ ಬೇರೆ ಪಾಸ್‌ಪೋರ್ಟ್‌ ಸಂಖ್ಯೆಗೆ ಒಂದೇ ಬಯೊಮೆಟ್ರಿಕ್‌ ಬಳಕೆಯಾಗಿತ್ತು. ಹೀಗಾಗಿ ಸ್ಪೇನ್‌ ಭೇಟಿಗೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.