ನವದೆಹಲಿ: ಮಣಿಪುರದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಪರಿಶೀಲಿಸಲು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ರಾಜಧಾನಿ ಇಂಫಾಲ್‌ಗೆ ತಲುಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಪೊಲೀಸರು ತನಿಖೆ ನಡೆಸಿದ್ದ 27 ಪ್ರಕರಣಗಳನ್ನು ಸಿಬಿಐ ವಹಿಸಿಕೊಂಡಿದೆ.
ಹಿಂಸಾಚಾರದಲ್ಲಿ 175ಕ್ಕೂ ಹೆಚ್ಚು ಮಂದಿ ಮೃತಪಟ್ಟರೆ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಪ್ರವೀಣ್ ಸೂದ್, ಗುವಾಹಟಿಯಿಂದ ಇಂಫಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಬರಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರವೀಣ್ ಸೂದ್, ಡಿಜಿಪಿ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಅವರು ಹೇಳಿದ್ದಾರೆ.
ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ(ಎಸ್‌ಟಿ) ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಮೇ 3ರಂದು ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ಬಳಿಕ, ಘರ್ಷಣೆ ಭುಗಿಲೆದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.