ನವದೆಹಲಿ: ‘ನೀಟ್–ಯುಜಿ’ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಪ್ರಕರಣದಲ್ಲಿ ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿದ್ದು, 13 ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಲ್ಲಿ (ನೀಟ್–ಯುಜಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ ಸಿಬಿಐ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.
ಬಿಹಾರದಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಒಂದು ಎಫ್‌ಐಆರ್ ದಾಖಲಿಸಲಾಗಿದೆ. ಉಳಿದ ಎಫ್‌ಐಆರ್‌ಗಳು ಗುಜರಾತ್, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ನಡೆದಿದೆ ಎನ್ನಲಾದ ವಂಚನೆ ಹಾಗೂ ಅಭ್ಯರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗಿದ್ದಕ್ಕೆ ಸಂಬಂಧಿಸಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.