ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರು ಆರೋಪಿಗಳ ವಿರುದ್ಧ ಭಯೋತ್ಪಾದನೆ ಕೃತ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಜಾರಿಗೊಳಿಸಲಾಗಿದೆ.
ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ ಸೆಕ್ಷನ್ 15 ಮತ್ತು 16 (ಭಯೋತ್ಪಾದನೆ ಕೃತ್ಯ) ಜಾರಿಗೊಳಿಸಲಾಗಿದೆ ಎಂದು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಎಸ್.ಎಂ.ಎ. ಸಯ್ಯದ್ ಅವರಿಗೆ ಸಿಬಿಐ ತಿಳಿಸಿದೆ.
ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿ ಸದಸ್ಯ ವಿರೇಂದ್ರಸಿಂಹ ತಾವ್ಡೆ, ಸಚಿನ್ ಅಂಧುರೆ, ಶರದ್ ಕಳಾಸ್ಕರ್, ರಾಜೇಶ್ ಬಂಗೇರಾ, ಅಮೋಲ್ ಕಾಳೆ, ಅಮಿತ್ ದೆಗ್ವೇಕರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.