ನವದೆಹಲಿ: ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಜತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಯುವ ನಾಯಕ ಆಶಿಶ್ ಪಾಂಡೆ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಮಾಜಿ ಪ್ರಾಚಾರ್ಯ ಸಂದೀಪ್ ಘೋಷ್ ಅವರ ನಿಕಟವರ್ತಿಯಾದ ಆಶಿಶ್ ಪಾಂಡೆ ಅವರನ್ನು ಸಿಬಿಐ ಸೆಪ್ಟೆಂಬರ್ 30ರಂದು ವಿಚಾರಣೆಗೆ ಒಳಪಡಿಸಿತ್ತು.
ಘೋಷ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸೆಪ್ಟೆಂಬರ್ 2ರಂದು ಬಂಧಿಸಿತ್ತು. ಬಳಿಕ ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಆಗಸ್ಟ್ 9ರಂದು ನಡೆದಿದ್ದ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲೂ ಅವರನ್ನು ವಶಕ್ಕೆ ಪಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.