ADVERTISEMENT

ಬಿಹಾರ: ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಏಜೆನ್ಸೀಸ್
Published 6 ಮಾರ್ಚ್ 2023, 6:15 IST
Last Updated 6 ಮಾರ್ಚ್ 2023, 6:15 IST
   

ಪಾಟ್ನಾ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ಸೋಮವಾರ ವಿಚಾರಣೆ ನಡೆಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ತಮ್ಮ ಪತಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಇತರ 14 ಮಂದಿಯೊಂದಿಗೆ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಮಾರಾಟ ಮಾಡಿದ ಕುಟುಂಬಗಳಿಗೆ ರೈಲ್ವೇಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.

ADVERTISEMENT

ಅವರ ಪಾಟ್ನಾ ನಿವಾಸದಲ್ಲಿ ವಿಚಾರಣೆಯ ನಡೆಯುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ರಾಬ್ರಿ ದೇವಿ ಅವರನ್ನು ಸಿಬಿಐ ಕಚೇರಿಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ತೇಜ್ ಪ್ರತಾಪ್ ಯಾದವ್ ಕೂಡ ಸಿಬಿಐ ದಾಳಿ ನಡೆಯುತ್ತಿರುವುದರಿಂದ ರಾಬ್ರಿ ದೇವಿ ಅವರ ನಿವಾಸದಲ್ಲಿ ಹಾಜರಿದ್ದರು.

ಫೆಬ್ರವರಿ 27 ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಇತರ 14 ಜನರಿಗೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸಮನ್ಸ್ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.