ADVERTISEMENT

ಅಮ್ನೆಸ್ಟಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಸಿಬಿಐ ಶೋಧ

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಮೇಲೆ ಸಿಬಿಐ ದಾಳಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2019, 20:57 IST
Last Updated 15 ನವೆಂಬರ್ 2019, 20:57 IST
ಅಮ್ನೆಸ್ಟಿ  ಸಂಸ್ಥೆ
ಅಮ್ನೆಸ್ಟಿ  ಸಂಸ್ಥೆ   

ಬೆಂಗಳೂರು: ವಿದೇಶಿ ದೇಣಿಗೆ ಸಂಬಂಧದ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್‌ ಇಂಡಿಯಾ (ಎಐಐ) ಬೆಂಗಳೂರು ಹಾಗೂ ನವದೆಹಲಿ ಕಚೇರಿಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿ ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ.

ಬೆಳಿಗ್ಗೆ 10 ಗಂಟೆಗೆ ಆರಂಭವಾದ ದಾಳಿ ಸಂಜೆವರೆಗೂ ನಡೆಯಿತು. ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಕಚೇರಿ ಪ್ರತಿನಿಧಿಗಳನ್ನು ಪ್ರಶ್ನಿಸಲಾಯಿತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಆದರೆ, ಈ ದಾಳಿ ಕುರಿತು ತನಿಖಾ ಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಎಐಐ ಮೂಲಗಳು ದಾಳಿ ನಡೆದಿರುವುದನ್ನು ಖಚಿತಪಡಿಸಿವೆ.

ADVERTISEMENT

ಕಿರುಕುಳ ಆರೋಪ:‘ಮಾನವ ಹಕ್ಕುಗಳ ಪರವಾಗಿ ಹೋರಾಡುವ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಮೇಲೆ ದಾಳಿ ನಡೆಸಿ ಕಿರುಕುಳ ನೀಡಲಾಗುತ್ತಿದೆ’ ಎಂದು ಸಂಘಟನೆ ಆರೋಪಿಸಿದೆ. ಇಂಥ ದಾಳಿಗಳ ಮೂಲಕ ಸಂಸ್ಥೆಯ ಸೊಲ್ಲಡಗಿಸಲು ಸಾಧ್ಯವಿಲ್ಲ ಎಂದೂ ಅದು ಹೇಳಿದೆ.

ಕಳೆದ ವರ್ಷ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೇ ಸಂಸ್ಥೆಯ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.

ಇದನ್ನೂ ಓದಿ:ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಕಚೇರಿ ಮೇಲೆ ಇ.ಡಿ ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.