ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಆರ್‌ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಾಲು ಪ್ರಸಾದ್ ಯಾದವ್‌ಗೆ ಸಂಬಂಧಿಸಿದ17ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ಪಡೆಯಲಾಗಿದೆ ಎಂಬುದು ಲಾಲು ಪ್ರಸಾದ್ ವಿರುದ್ಧದ ಹೊಸ ಆರೋಪವಾಗಿದೆ.
ಹೊಸ ಪ್ರಕರಣ ಸಂಬಂಧ ಲಾಲು ಪ್ರಸಾದ್ ಹಾಗೂ ಕುಟುಂಬಸ್ಥರಿಗೆ ಸಂಬಂಧಿಸಿದ ಬಿಹಾರ, ದೆಹಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಮೇವು ಹಗರಣದಲ್ಲಿ ಲಾಲು ಪ್ರಸಾದ್ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದರು.
ಲಾಲು ಪ್ರಸಾದ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಎಸೆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.