ADVERTISEMENT

ವೈದ್ಯ ವಿದ್ಯಾರ್ಥಿನಿ ಕೊಲೆ: ಕಾಲೇಜಿನ ಮಾಜಿ ಪ್ರಾಂಶುಪಾಲ ಘೋಷ್ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2024, 11:29 IST
Last Updated 24 ಆಗಸ್ಟ್ 2024, 11:29 IST
<div class="paragraphs"><p>ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಹಾಗೂ&nbsp;ಅತ್ಯಾಚಾರ,&nbsp;ಕೊಲೆ ಪ್ರಕರಣ ಖಂಡಿಸಿ ಆಸ್ಪತ್ರೆಯ ಗೋಡೆ ಮೇಲೆ ಬೃಹತ್‌ ಪೋಸ್ಟ್‌ ಹಾಕಿರುವುದು.</p></div>

ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಹಾಗೂ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಆಸ್ಪತ್ರೆಯ ಗೋಡೆ ಮೇಲೆ ಬೃಹತ್‌ ಪೋಸ್ಟ್‌ ಹಾಕಿರುವುದು.

   

ಚಿತ್ರಕೃಪೆ: rgkarmch.in ಮತ್ತು ಪಿಟಿಐ

ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ವರದಿಯಾಗಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಎಫ್‌ಐಆರ್‌ ದಾಖಲಿಸಿದೆ.

ADVERTISEMENT

31 ವರ್ಷದ ವಿದ್ಯಾರ್ಥಿನಿಯ ಶವ ಆಸ್ಪತ್ರೆಯ ಸೆಮಿನಾರ್‌ ಸಭಾಂಗಣದಲ್ಲಿ ಆಗಸ್ಟ್‌ 9ರಂದು ಪತ್ತೆಯಾಗಿತ್ತು. ಪ್ರಕರಣ ವರದಿಯಾಗುತ್ತಿದ್ದಂತೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಸುಳ್ಳು ಪತ್ತೆ ಪರೀಕ್ಷೆ
ಪ್ರಕರಣದ ಪ್ರಮುಖ ಆರೋಪಿ ಸಂಜಯ್‌ ರಾಯ್‌, ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಹಾಗೂ ಇತರ ನಾಲ್ವರು ವೈದ್ಯರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಕೋಲ್ಕತ್ತದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.