ADVERTISEMENT

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಡಿಯೊ ಹಂಚಿಕೆ: ದೆಹಲಿಯಲ್ಲಿ ಸಿಬಿಐ ಶೋಧ

ಪಿಟಿಐ
Published 1 ಡಿಸೆಂಬರ್ 2022, 11:48 IST
Last Updated 1 ಡಿಸೆಂಬರ್ 2022, 11:48 IST
ಕೇಂದ್ರೀಯ ತನಿಖಾ ದಳ
ಕೇಂದ್ರೀಯ ತನಿಖಾ ದಳ   

ನವದೆಹಲಿ: ಮಕ್ಕಳ ಮೇಲಿನಲೈಂಗಿಕ ದೌರ್ಜನ್ಯಕ್ಕೆ(ಸಿಎಸ್‌ಎಎಂ) ಸಂಬಂಧಿಸಿದ ಆಡಿಯೊ, ವಿಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪದಡಿ ದೇಶದ ಹಲವೆಡೆ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ದಾಳಿ ನಡೆಸಿದೆ.

ಇಂಟರ್‌ಪೋಲ್‌ ಘಟಕದಮಾಹಿತಿ ಆಧರಿಸಿ ದೆಹಲಿ, ತಿರುಚಿರಾಪಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಪರೇಷನ್ 'ಮೇಘ ಚಕ್ರ'ದ ಭಾಗವಾಗಿ ಸೆಪ್ಟೆಂಬರ್‌ನಲ್ಲಿ ಸಿಬಿಐಶೋಧ ನಡೆಸಿತ್ತು. ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

ADVERTISEMENT

ಕ್ಲೌಡ್ ಸ್ಟೋರೇಜ್ ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಸಿಎಸ್‌ಎಎಂ ದಂಧೆ ನಡೆಸುತ್ತಿದ್ದ ಪೆಡ್ಲರ್‌ಗಳ ವಿರುದ್ಧ ಕಳೆದ ವರ್ಷ ನಡೆದ ಆಪರೇಷನ್ ಕಾರ್ಬನ್ ದಾಳಿ ಸಮಯದಲ್ಲಿ ಪಡೆದ ಗುಪ್ತಚರ ಮಾಹಿತಿ ಮತ್ತು ಸಿಂಗಾಪುರದ ಇಂಟರ್‌ಪೋಲ್ ಮಾಹಿತಿ ಆಧರಿಸಿ ಈ ದಾಳಿ ನಡೆದಿತ್ತು.

ಅಪ್ರಾಪ್ತರ ಲೈಂಗಿಕ ಚಟುವಟಿಕೆಗಳ ಆಡಿಯೊ-ದೃಶ್ಯಗಳನ್ನು ಪ್ರಸಾರ ಮಾಡಲು ಪೆಡ್ಲರ್‌ಗಳು ಬಳಸುವ ಕ್ಲೌಡ್ ಸ್ಟೋರೇಜ್ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.