ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ಎಸ್‌ಸಿ, ಎಸ್‌ಟಿ) ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನವನ್ನು ಮಧ್ಯಂತರ ಬಜೆಟ್‌ನಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ ಕಲ್ಯಾಣಕ್ಕಾಗಿ ₹76,801 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಶೇ 35.6 ರಷ್ಟು ಹೆಚ್ಚಾಗಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಕ್ಕೆ ₹50,086 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಶೇ 28 ರಷ್ಟು ಹೆಚ್ಚು.
ನರೇಗಾಗೆ ₹60,000 ಕೋಟಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ ₹60,000 ಕೋಟಿ ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಈ ಅನುದಾನವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಆಹಾರ: ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಆಹಾರಧಾನ್ಯ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. 2018–2019ರಲ್ಲಿ ₹1,70,000 ಕೋಟಿ ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರಧಾನ್ಯ ದೊರಕಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಗ್ರಾಮೀಣ ರಸ್ತೆಗಳಸುಧಾರಣೆಗೆ ಕ್ರಮ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಮಧ್ಯಂತರ ಬಜೆಟ್‌ನಲ್ಲಿ ₹19,000 ಕೋಟಿ ಮೀಸಲಿಡಲಾಗಿದೆ. 17.84 ಲಕ್ಷ ವಾಸಸ್ಥಳದ ಪೈಕಿ 15.80 ಲಕ್ಷ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಉಳಿದ ರಸ್ತೆಗಳ ಕಾಮಗಾರಿ ಮುಗಿಯುವ ಹಂತದಲ್ಲಿದೆ ಎಂದು ಬಜೆಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಬಜೆಟ್ ಸಂಬಂಧಿತ ಇನ್ನಷ್ಟು ಸುದ್ದಿಗಳು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.