ನವದೆಹಲಿ: ಕಚ್ಚಾ ತೈಲ ದರ ಕಡಿಮೆ ಇದ್ದು, ಇಂಧನ ಬೆಲೆಯನ್ನು ಇಳಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಇಂಧನ ದರ ಇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ 6 ತಿಂಗಳಲ್ಲಿ ಕಚ್ಚಾ ತೈಲ ಬೆಲೆ ಶೇ 25ಕ್ಕಿಂತ ಹೆಚ್ಚು ಅಗ್ಗವಾಗಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ₹10ಕ್ಕಿಂತ ಹೆಚ್ಚು ಕಡಿಮೆಯಾಗಬಹುದು, ಆದರೆ, ಕೇಂದ್ರ ಸರ್ಕಾರ ₹1 ಇಳಿಸಿಲ್ಲ’ ಎಂದು ಗುಡುಗಿದ್ದಾರೆ.
‘ದೇಶದ ಜನರು ಹಣದುಬ್ಬರ ಏರಿಕೆ ಬಳಲುತ್ತಿದ್ದಾರೆ. ಇತ್ತ ಪ್ರಧಾನಿ ಮೋದಿ ಅವರು ಜನರನ್ನು ಲೂಟಿ ಮಾಡುವುದರಲ್ಲಿ ನಿರತರಾಗಿದ್ದಾರೆ’ ಎಂದು ರಾಹುಲ್ ದೂರಿದ್ದಾರೆ.
ರಾಹುಲ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದ್ದು, ಡಿ. 4ರಂದು ರಾಜಸ್ಥಾನವನ್ನು ಪ್ರವೇಶಿಸಲಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.