ನವದೆಹಲಿ: ತೆಲಂಗಾಣ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.
ಜುಲೈ 5 ರಂದು ಕೊಲಿಜಿಯಂ ಮಾಡಿದ್ದ ಶಿಫಾರಿಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಇಬ್ಬರ ನೇಮಕವನ್ನು ಅಂತಿಮಗೊಳಿಸಿದೆ.
ಭುಯಾನ್ ಅವರು ಆಂಧ್ರಪ್ರದೇಶದವರು. 2011ರಲ್ಲಿ ಗುವಾಹಟಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ವೆಂಕಟನಾರಾಯಣ ಭಟ್ಟಿ ಅವರು 2013ರಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಈ ಇಬ್ಬರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.