ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಗರ ಪ್ರದೇಶಗಳಲ್ಲಿ 1.68 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಗುರುವಾರ ನಡೆದ ಕೇಂದ್ರ ಮಂಜೂರು ಮತ್ತು ನಿರ್ವಹಣಾ ಸಮಿತಿ (ಸಿಎಸ್‌ಎಂಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಸಭೆಯಲ್ಲಿ 14 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪಿಎಂಎವೈ-ಯು ಅಡಿಯಲ್ಲಿ ಇದುವರೆಗೆ 41 ಲಕ್ಷ ಮನೆಗಳು ಪೂರ್ಣಗೊಂಡಿದ್ದು, 70 ಲಕ್ಷಕ್ಕೂ ಹೆಚ್ಚು ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಸಚಿವಾಲಯ ತಿಳಿಸಿದೆ.
ಪಿಎಂಎವೈ (ನಗರ) ಅಡಿಯಲ್ಲಿ ಕೇಂದ್ರ ಮಂಜೂರು ಮತ್ತು ನಿರ್ವಹಣಾ ಸಮಿತಿ (ಸಿಎಸ್‌ಎಂಸಿ) ಸಭೆಯಲ್ಲಿ 1,68,606 ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2015ರಲ್ಲಿ ಪ್ರಾರಂಭಿಸಿದ ಪಿಎಂಎವೈ (ಯು) ಯೋಜನೆ 2022ರ ವೇಳೆಗೆ ಎಲ್ಲರಿಗೂ ವಸತಿ ಕಲ್ಪಿಸುವ ಗುರಿಯನ್ನು ಹೊಂದಿದೆ. 2015ರಿಂದ 2022ರವರೆಗೆ ಏಳು ವರ್ಷಗಳ ಅವಧಿಯಲ್ಲಿ ದೇಶದ ನಗರ ಪ್ರದೇಶಗಳಲ್ಲಿ 1.12 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.