ADVERTISEMENT

ಬೇಲೂರು–ಹಾಸನ| ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ₹700 ಕೋಟಿ: ನಿತಿನ್ ಗಡ್ಕರಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 13:43 IST
Last Updated 26 ಮಾರ್ಚ್ 2023, 13:43 IST
.
.   

ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ 373ರ ಬೇಲೂರಿನಿಂದ ಹಾಸನ ವರೆಗಿನ ವಿಭಾಗದಲ್ಲಿ ರಸ್ತೆ ವಿಸ್ತರಣೆಗಾಗಿ ₹698.08 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.

2022–23ರ ಯೋಜನೆ ಅಡಿಯಲ್ಲಿ ಈ ಹೆದ್ದಾರಿಯ ವಿಸ್ತರಣೆ ಕಾಮಗಾರಿಯನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಸಚಿವರು ಟ್ವೀಟ್‌ ಮಾಡಿದ್ದಾರೆ.

ಸಂಚಾರ ದಟ್ಟಣೆ ತಪ್ಪಿಸಲು ಈ ರಸ್ತೆಯನ್ನು ವಿಸ್ತರಣೆ ಮಾಡಬೇಕೆಂಬುದು ಅಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.