ADVERTISEMENT

ಏಕರೂಪದ ಬ್ಯಾಂಕಿಂಗ್ ಸಂಹಿತೆ–ಪರಿಶೀಲನೆಗೆ ಹೈಕೋರ್ಟ್‌

ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚನೆ

ಪಿಟಿಐ
Published 5 ಏಪ್ರಿಲ್ 2022, 15:17 IST
Last Updated 5 ಏಪ್ರಿಲ್ 2022, 15:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ (ಪಿಟಿಐ): ಕಪ್ಪು ಹಣ ಹಾಗೂ ಬೇನಾಮಿ ವ್ಯವಹಾರಗಳ ನಿಯಂತ್ರಣಕ್ಕಾಗಿ ವಿದೇಶಿ ವಿನಿಮಯದ ವಹಿವಾಟುಗಳಿಗೆ ಏಕರೂಪದ ಬ್ಯಾಂಕಿಂಗ್ ಸಂಹಿತೆ ಜಾರಿಗೊಳಿಸುವ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಗೃಹ ಇಲಾಖೆ ವ್ಯವಹಾರಗಳು, ಕಾನೂನು ಮತ್ತು ನ್ಯಾಯ ಹಾಗೂ ಹಣಕಾಸು ಸಚಿವಾಲಯಗಳ ಮೂಲಕ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಅಲ್ಲದೆ ಈ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸಬೇಕು ಎಂದು ಸೂಚಿಸಿ, ಈ ಕುರಿತಾದ ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ.

ಅರ್ಜಿದಾರನು ಬಹಳ ಗಂಭೀರವಾದ ವಿಚಾರವನ್ನು ಎತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಪರಿಶೀಲನೆ ನಡೆಸಲಿದೆ ಎಂದು ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.