ನವದೆಹಲಿ: ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ತೆಹ್ರೀಕ್–ಎ–ಹುರಿಯತ್ (ಟಿಇಎಚ್) ಮತ್ತು ಪ್ರತ್ಯೇಕತಾವಾದಿ ಮುಖಂಡ ಮಸರತ್ ಆಲಂ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಗಳ ಎಲ್ಲಾ ಆಸ್ತಿಗಳನ್ನು ಜಪ್ತಿ ಮಾಡುವಂತೆ ಕೇಂದ್ರ ಸರ್ಕಾರವು ಜಮ್ಮು–ಕಾಶ್ಮೀರ ಆಡಳಿತಕ್ಕೆ ಗುರುವಾರ ನಿರ್ದೇಶನ ನೀಡಿದೆ.
ಅಲ್ಲದೆ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹಾಗೂ ಈ ಸಂಘಟನೆಗಳಿಗೆ ಹಣದ ಹರಿವನ್ನು ತಡೆಹಿಡಿಯುವಂತೆಯೂ ಸೂಚಿಸಲಾಗಿದೆ. ಈ ಎರಡೂ ಸಂಘಟನೆಗಳನ್ನು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ನಿಷೇಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.