ಕೋಲ್ಕತ್ತ: ‘ಮದರ್ ತೆರೇಸಾ ಸ್ಥಾಪಿಸಿದ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕೇಂದ್ರವು ಸ್ಥಗಿತಗೊಳಿಸಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.
‘ಕ್ರಿಸ್‌ಮಸ್ ಸಂದರ್ಭದಲ್ಲಿ ಕೇಂದ್ರವು ಭಾರತದಲ್ಲಿ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು! ಈ ಕ್ರಮದಿಂದ ಮಿಷನರೀಸ್ ಆಫ್ ಚಾರಿಟಿಯ 22,000 ರೋಗಿಗಳು ಮತ್ತು ಉದ್ಯೋಗಿಗಳು ಆಹಾರ ಮತ್ತು ಔಷಧಿಗಳಿಲ್ಲದೆ ಕಂಗಾಲಾಗಿದ್ದಾರೆ’ ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.