ADVERTISEMENT

ಕೇಂದ್ರದಿಂದ ರೈತರಿಗೆ ಅನ್ಯಾಯ: ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌

ಪಿಟಿಐ
Published 13 ಫೆಬ್ರುವರಿ 2024, 11:52 IST
Last Updated 13 ಫೆಬ್ರುವರಿ 2024, 11:52 IST
ಜೈರಾಮ್‌ ರಮೇಶ್‌
ಜೈರಾಮ್‌ ರಮೇಶ್‌   

ಅಂಬಿಕಾಪುರ(ಛತ್ತೀಸ್‌ಗಢ): ಕೇಂದ್ರ ಸರ್ಕಾರ ‘ರೈತರ ಅಭಿವೃದ್ಧಿಗಾಗಿ ಶ್ರಮಿಸಿದ್ದ ಹಿರಿಯ ನಾಯಕ ಚೌಧರಿ ಚರಣ್‌ ಸಿಂಗ್‌, ಕೃಷಿ ವಿಜ್ಞಾನಿ ಎಂ.ಎಸ್‌.ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ಘೋಷಿಸಿದೆ. ಆದರೆ ಮತ್ತೊಂದು ಕಡೆ ರೈತರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಅವರು ಕೇಂದ್ರ ಸರ್ಕಾರವನ್ನು ಮಂಗಳವಾರ ಟೀಕಿಸಿದ್ದಾರೆ.

ಭಾರತ ಜೋಡೊ ನ್ಯಾಯ ಯಾತ್ರೆ ಅಂಗವಾಗಿ ಛತ್ತೀಸಗಢದ ಅಂಬಿಕಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ರೈತರಿಗಾಗಿ ಶ್ರಮಿಸಿದ ಇಬ್ಬರು ಮಹನೀಯರಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಘೋಷಿಸಿರುವ ಕೇಂದ್ರ ಸರ್ಕಾರ, ರೈತರ ಹಿತಾಸಕ್ತಿ ಹಾಗೂ ಹಕ್ಕುಗಳನ್ನು ಹತ್ತಿಕ್ಕುವ ಮೂಲಕ ರೈತಾಪಿ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೊಪಿಸಿದ್ದಾರೆ. 

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ರೈತರು ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶದ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ‘ದೆಹಲಿ ಚಲೋ’ ಹಮ್ಮಿಕೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸದಂತೆ ತಡೆಯುತ್ತಿರುವುದು ಖಂಡನೀಯ ಎಂದರು. ಅವರು ಹೇಳಿದರು. 

ADVERTISEMENT

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸರ್ಕಾರಕ್ಕೆ ದೇಣಿಗೆ ನೀಡುವವರ (ಉದ್ಯಮಿಗಳ) ₹14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ, ಅನ್ನದಾತನ ₹ 1 ಲಕ್ಷ ಕೋಟಿ ಸಾಲ ಮನ್ನಾ ಮಾಡುತ್ತಿಲ್ಲ’ ಎಂದು ಟೀಕಿಸಿದರು.

ಈಗಾಗಲೇ ಸರ್ಕಾರದ ಪ್ರತಿನಿಧಿಗಳು ಹಾಗೂ ರೈತರ ನಡುವಿನ ಮೊದಲ ಹಂತದ ಮಾತುಕತೆ ಮುರಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರನ್ನು ಬಲವಂತಾ ತಡೆಯುತ್ತಿದೆ. ದೆಹಲಿಯ ಗಡಿಯಲ್ಲಿ ಕಾಂಕ್ರೀಟ್‌ ಗೋಡೆಗಳು, ಇಟ್ಟಿಗೆಗಳು, ಕಬ್ಬಿಣದ ಮೊಳೆಗಳು ಹಾಗೂ ಕಂಟೇನರ್‌ಗಳನ್ನು ಅಡ್ಡ ಹಾಕುವ ಮೂಲಕ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.