ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ನ್ಯಾಯೋಚಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಇಸ್ರೊ ಮಾಜಿ ಅಧ್ಯಕ್ಷ ಕೆ.ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯೊಂದನ್ನು ಕೇಂದ್ರ ಶಿಕ್ಷಣ ಸಚಿವಾಲಯ ಶನಿವಾರ ರಚಿಸಿದೆ.
ಎನ್‌ಟಿಎ ನಡೆಸುವ ಪರೀಕ್ಷಾ ಪದ್ಧತಿಯಲ್ಲಿ ಯಾವ ರೀತಿಯ ಸುಧಾರಣೆ ತರಬೇಕು ಎಂಬ ಶಿಫಾರಸನ್ನು ಏಳು ಸದಸ್ಯರ ಸಮಿತಿ ನೀಡಲಿದೆ. ಇದರಲ್ಲಿ ಮಾಹಿತಿ ಭದ್ರತೆಯನ್ನು ಉತ್ತಮಪಡಿಸಿಕೊಳ್ಳುವುದು ಹೇಗೆ ಹಾಗೂ ಎನ್‌ಟಿಎ ರಚನೆ ಹಾಗೂ ಕಾರ್ಯಾಚರಣೆ ಹೇಗಿರಬೇಕು ಎಂಬುದನ್ನು ಈ ಸಮಿತಿಯು ಸಚಿವಾಲಯಕ್ಕೆ ತಿಳಿಸಲಿದೆ.
2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ಸಚಿವಾಲಯ ತಿಳಿಸಿದೆ. ಸಮಿತಿಯಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಜೆ.ರಾವ್ ಹಾಗೂ ಏಮ್ಸ್‌ನ ಮಾಜಿ ನಿರ್ದೇಶಕ ರಂದೀಪ್ ಗುಲೇರಿಯಾ ಅವರೂ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.