ನವದೆಹಲಿ: ವಿವಾದಿತವಲ್ಲದ 67 ಎಕರೆ ಭೂಮಿಯನ್ನು ರಾಮ ಜನ್ಮಭೂಮಿ ವ್ಯಾಸ್ ಸಮಿತಿಗೆ ಒಪ್ಪಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ಮನವಿ ಸಲ್ಲಿಸಿದೆ.
ಬಾಬರಿ ಮಸೀದಿಯನ್ನು ಕೆಡವಿದ ಬಳಿಕ ಸರ್ಕಾರ 67 ಎಕರೆ ಭೂಮಿಯನ್ನು ವಶಕ್ಕೆ ಪಡೆದಿತ್ತು. ಆ ಭೂಮಿರಾಮ ಜನ್ಮಭೂಮಿ ವ್ಯಾಸ ಸಮಿತಿಗೆ ಸೇರಿದ್ದುಅದನ್ನು ನ್ಯಾಸ್ ಸಮಿತಿಗೆ ಮರಳಿ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
1994ರಲ್ಲಿ ಸುಪ್ರಿಂ ಕೋರ್ಟ್ 67 ಎಕರೆ ಭೂಮಿರಾಮ ಜನ್ಮಭೂಮಿ ವ್ಯಾಸ್ ಸಮಿತಿಗೆ ಸೇರಿದ್ದು ಈ ವಿವಾದ ಬಗೆಹರಿಯುವವರೆಗೂ ಆ ಜಮೀನು ಸರ್ಕಾರದ ಅಧೀನದಲ್ಲಿಯೇ ಇರಬೇಕು. ಅದನ್ನು ಯಾರಿಗೂ ಹಸ್ತಾಂತರ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ವಿವಾದ ಬಗೆಹರಿದ ಬಳಿಕ ಅದನ್ನು ಮೂಲ ಮಾಲೀಕರಿಗೆ ನೀಡುವಂತೆ ಸುಪ್ರೀಂಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ವಿವಾದಿತ 2.7 ಎಕರೆ ಭೂಮಿಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನುರಾಮ ಮಂದಿರ ನಿರ್ಮಾಣದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್‌ಗೆ ನೀಡಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ.
ಕೇಂದ್ರ ಸರ್ಕಾರ ಸಲ್ಲಿಸಿರುವ ಈ ನೂತನ ಅರ್ಜಿಯ ವಿಚಾರಣೆ ನಡೆಯಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.