ನವದೆಹಲಿ: ಸಂಘರ್ಷ ಪೀಡಿತ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸುಮಾರು 5,000ಕ್ಕೂ ಸಿಬ್ಬಂದಿಯನ್ನು ಒಳಗೊಂಡ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ತುಕಡಿಗಳನ್ನು ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಜಿರೀಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ನವೆಂಬರ್ 12ರಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ 20 ಹೆಚ್ಚುವರಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ತುಕಡಿಗಳನ್ನು ರಾಜ್ಯಕ್ಕೆ ಕಳುಹಿಸಿತ್ತು. ಈ ಸಿಎಪಿಎಫ್ ತುಕಡಿಗಳಲ್ಲಿ 15 ಸಿಆರ್‌ಪಿಎಫ್ ತುಕಡಿಗಳು ಮತ್ತು 5 ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತುಕಡಿಗಳು ಸೇರಿದ್ದವು.
ಈ ವಾರದೊಳಗೆ ಹೆಚ್ಚುವರಿ 50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸುವಂತೆ ಆದೇಶಿಸಲಾಗಿದೆ. ಇವುಗಳಲ್ಲಿ 35 ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತುಕಡಿಗಳು ಹಾಗೂ 15 ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತುಕಡಿಗಳು ಇರಲಿವೆ ಎಂದು ಮೂಲಗಳು ತಿಳಿಸಿವೆ.
ಮಣಿಪುರದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ಶುರುವಾದ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಈ ಬೆಳವಣಿಗೆ ನಂತರ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಈವರೆಗೆ ಒಟ್ಟು ಸಿಎಪಿಎಫ್‌ಗಳ 218 ತುಕಡಿಗಳನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.