ADVERTISEMENT

ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2023, 20:46 IST
Last Updated 13 ಜುಲೈ 2023, 20:46 IST
ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಕೊರತೆ
ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಕೊರತೆ   

ನವದೆಹಲಿ: ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದ 8 ತಿಂಗಳ ಬಳಿಕ ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳನ್ನು ಕೇಂದ್ರ ಸರ್ಕಾರ ಗುರುವಾರ ವರ್ಗಾವಣೆ ಮಾಡಿದೆ.   

ನ್ಯಾಯಮೂರ್ತಿ ಡಿ. ರಮೇಶ್‌ ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ಮತ್ತು ನ್ಯಾಯಮೂರ್ತಿ ವಿಪುಲ್‌ ಎಂ. ಪಾಂಚೋಲಿ ಅವರನ್ನು ಗುಜರಾತ್‌ ಹೈಕೋರ್ಟ್‌ನಿಂದ ಪಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾವ್‌ ಮೇಘವಾಲ್‌ ಟ್ವೀಟ್‌ ಮಾಡಿ ತಿಳಿಸಿದ್ದಾರೆ.  

ನ್ಯಾ. ಪಂಚೋಲಿ ವರ್ಗಾವಣೆಗೆ 2022ರ ಸೆ.29ರಂದು, ನ್ಯಾ.ರಮೇಶ್‌ ಮತ್ತು ಕನ್ನೆಗಂಟಿ ಅವರ ವರ್ಗಾವಣೆಗೆ ನ.24ರಂದು ಕೊಲಿಜಿಯಂ ಶಿಫಾರಸು ಮಾಡಿತ್ತು. 

ADVERTISEMENT

ಗುಜರಾತ್‌ ಹೈಕೋರ್ಟ್‌ನಿಂದ ಪಾಂಚೋಲಿ ಅವರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿರುವ ಗುಜರಾತ್‌ ಹೈಕೋರ್ಟ್‌ ವಕೀಲರ ಸಂಘ ಪ್ರತಿಭಟನೆ ನಡೆಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.