ಥಾಣೆ (ಪಿಟಿಐ): ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರನ್ನು ‘ಲಖ್ಪತಿ’ಗಳನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ.
ಥಾಣೆ ಜಿಲ್ಲೆಯ ಶಹಾಪುರದಲ್ಲಿ ಮಹಿಳೆಯರ ಒಂದು ದಿನದ ಕಾರ್ಯಾಗಾರ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ 25 ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು.
‘ಭಾರತದಲ್ಲಿ 9 ಕೋಟಿ ಮಹಿಳೆಯರನ್ನು ಒಳಗೊಂಡ 86,000 ಸ್ವಸಹಾಯ ಸಂಘಗಳಿವೆ. ಕಳೆದ ಎಂಟು ವರ್ಷಗಳಲ್ಲಿ ಸರ್ಕಾರವು ಈ ಮಹಿಳೆಯರಿಗೆ ₹ 6.26 ಲಕ್ಷ ಕೋಟಿ ವಿತರಿಸಿದೆ. ಸ್ವಸಹಾಯ ಸಂಘಗಳ ಪ್ರತಿಯೊಬ್ಬ ಸದಸ್ಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ದೇಶದಲ್ಲಿ ‘ಲಖ್ಪತಿ ದೀದಿ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.
ಥಾಣೆ ಜಿಲ್ಲೆಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರ ಆದಾಯವು ಹೆಚ್ಚಾಗುತ್ತದೆ ಮತ್ತು ಜಿಲ್ಲೆಯ ಜಿಡಿಪಿ ಸುಧಾರಿಸುತ್ತದೆ ಎಂದು ಸಿಂಗ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.