ನವದೆಹಲಿ: ಪ್ರಧಾನ ಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿಯ (ಇಎಸಿ-ಪಿಎಂ) ಅಧ್ಯಕ್ಷ ವಿವೇಕ್ ದೇಬರಾಯ್ (69) ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗುರುವಾರ ರಾತ್ರಿ ಏಮ್ಸ್‌ಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ದೇಬರಾಯ್ ಅವರು ರಾಮಕೃಷ್ಣ ಮಿಷನ್ ಶಾಲೆ, ಪ್ರೆಸಿಡೆನ್ಸಿ ಕಾಲೇಜು, ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೇಂಬ್ರಿಡ್ಜ್‌ನ ಟ್ರಿನಿಟಿ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.
ಕೋಲ್ಕತ್ತದ ಪ್ರೆಸಿಡೆನ್ಸಿ ಕಾಲೇಜು, ಪುಣೆಯ ಗೋಖಲೆ ಇನ್‌ಸ್ಟಿಟ್ಯೂಟ್ ಆಫ್ ಪಾಲಿಟಿಕ್ಸ್ ಆ್ಯಂಡ್ ಎಕನಾಮಿಕ್ಸ್, ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರಿನ್ ಟ್ರೇಡ್, ಹಣಕಾಸು ಸಚಿವಾಲಯದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
2019ರ ವರೆಗೆ ನೀತಿ ಆಯೋಗದ ಸದಸ್ಯರಾಗಿದ್ದ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಅವರಿಗೆ 2015ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.