ADVERTISEMENT

ವಿದ್ಯಾರ್ಥಿನಿಯರ ಖಾಸಗಿ ವಿಡಿಯೊ ಲೀಕ್ ಪ್ರಕರಣ: ತನಿಖೆಗೆ ಆದೇಶಿಸಿದ ಪಂಜಾಬ್ ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2022, 7:58 IST
Last Updated 18 ಸೆಪ್ಟೆಂಬರ್ 2022, 7:58 IST
ಭಗವಂತ್ ಮಾನ್
ಭಗವಂತ್ ಮಾನ್   

ಚಂಡೀಗಡ: ಹಾಸ್ಟೆಲ್‌ ವಿದ್ಯಾರ್ಥಿನಿಯರ ಖಾಸಗಿ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆದೇಶಿಸಿದ್ದಾರೆ.

ಘಟನೆ ಖಂಡಿಸಿ ಟ್ವೀಟ್ ಮಾಡಿರುವ ಅವರು, ‘ಚಂಡೀಗಡ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಕೇಳಿ ಬೇಸರವಾಗಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ವದಂತಿಗಳಿಗೆ ಕಿವಿ ಕೊಡದಂತೆ ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಖಂಡಿಸಿ ಪಂಜಾಬ್‌ನ ಮೊಹಾಲಿಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಲೂಧಿಯಾನ–ಚಂಡೀಗಡ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯರಾತ್ರಿ ಪ್ರತಿಭಟನೆ ನಡೆಸಲಾಗಿದೆ.

ADVERTISEMENT

ವಿಡಿಯೊಗಳನ್ನು ಶೇರ್‌ ಮಾಡಿದ್ದ ಸಹ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯರ ವಿಡಿಯೊಗಳನ್ನು ಚಿತ್ರೀಕರಿಸಿದ್ದ ಆಕೆ, ಶಿಮ್ಲಾದಲ್ಲಿರುವ ಯುವಕನಿಗೆ ಕಳುಹಿಸಿದ್ದರು. ಆತ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.