ADVERTISEMENT

ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಪಿಟಿಐ
Published 4 ಜುಲೈ 2024, 11:34 IST
Last Updated 4 ಜುಲೈ 2024, 11:34 IST
<div class="paragraphs"><p>ನರೇಂದ್ರ ಮೋದಿ ಹಾಗೂ ಚಂದ್ರಬಾಬು ನಾಯ್ಡು</p></div>

ನರೇಂದ್ರ ಮೋದಿ ಹಾಗೂ ಚಂದ್ರಬಾಬು ನಾಯ್ಡು

   

–ಫೇಸ್‌ಬುಕ್ ಚಿತ್ರ (ಪ್ರಧಾನ ಮಂತ್ರಿ ಕರ್ಯಾಲಯ)

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಚರ್ಚೆ ರಚನಾತ್ಮಕವಾಗಿತ್ತು ಎಂದು ಬಾಬು ಹೇಳಿದ್ದಾರೆ.

ADVERTISEMENT

‌ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನಿಡಬೇಕು ಎಂದು ಚಂದ್ರಬಾಬು ನಾಯ್ಡು ಪ್ರಧಾನಿಯವರಲ್ಲಿ ವಿನಂತಿಸಿಕೊಂಡಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟು, ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಭೆಯ ಬಳಿಕ ಚಂದ್ರಬಾಬು ನಾಯ್ಡು ವ್ಯಕ್ತಪಡಿಸಿದರು.

‘ಇಂದು ದೆಹಲಿಯಲ್ಲಿ ‍ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಚನಾತ್ಮಕ ಭೇಟಿ ನಡೆಯಿತು. ಆಂಧ್ರಪ್ರದೇಶ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಮತ್ತೆ ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ’ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉಭಯ ನಾಯಕರ ಭೇಟಿಯನ್ನು ಪ್ರಧಾನಮಂತ್ರಿ ಕಚೇರಿ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದೆ.

ಚಂದ್ರಬಾಬು ಅವರ ಎರಡು ದಿನಗಳ ದೆಹಲಿ ಭೇಟಿ ಇದಾಗಿದ್ದು, ಕೇಂದ್ರದ ಹಲವು ಸಚಿವರನ್ನೂ ಅವರು ಭೇಟಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ವಾಣಿಜ್ಯ ಸಚಿವ ಪಿಯುಷ್ ಗೋಯಲ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಭೇಟಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರೊಂದಿಗೂ ಭೇಟಿ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.