ADVERTISEMENT

ರೇವಂತ್ ರೆಡ್ಡಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು: ಜುಲೈ 6ರಂದು ಉಭಯ ನಾಯಕರ ಭೇಟಿ

ಪಿಟಿಐ
Published 2 ಜುಲೈ 2024, 3:14 IST
Last Updated 2 ಜುಲೈ 2024, 3:14 IST
<div class="paragraphs"><p>ರೇವಂತ್ ರೆಡ್ಡಿ ಮತ್ತು ಚಂದ್ರಬಾಬು ನಾಯ್ಡು</p></div>

ರೇವಂತ್ ರೆಡ್ಡಿ ಮತ್ತು ಚಂದ್ರಬಾಬು ನಾಯ್ಡು

   

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ಯರ್ಥವಾಗದ ರಾಜ್ಯ ವಿಭಜನೆ ಸಮಸ್ಯೆಗಳ ಕುರಿತು ಜುಲೈ 6ರಂದು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ಹೈದರಾಬಾದ್‌ನಲ್ಲಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡುವುದಾಗಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ADVERTISEMENT

‘ಹಿಂದಿನ ಆಂಧ್ರಪ್ರದೇಶ ವಿಭಜನೆಯಾಗಿ 10 ವರ್ಷಗಳಾಗಿವೆ. ನಮ್ಮ ರಾಜ್ಯಗಳ ಕಲ್ಯಾಣ ಮತ್ತು ಪ್ರಗತಿಗಾಗಿ ಮರು ಸಂಘಟನೆ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳ ಕುರಿತು ಅನೇಕ ಚರ್ಚೆಗಳು ನಡೆದಿವೆ’ ಎಂದು ನಾಯ್ಡು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡು ರಾಜ್ಯಗಳ ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ನಿಕಟ ಸಹಭಾಗಿತ್ವ ಹೊಂದುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಮುಖಾಮುಖಿ ಸಭೆಯಲ್ಲಿ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.