ADVERTISEMENT

Chandrayaan-3: ಚಂದ್ರನ ಅಂತಿಮ ಕಕ್ಷೆಗೆ ಲಗ್ಗೆ ಇಟ್ಟ ಭಾರತದ ಚಂದ್ರಯಾನ ನೌಕೆ

ಪಿಟಿಐ
Published 16 ಆಗಸ್ಟ್ 2023, 5:07 IST
Last Updated 16 ಆಗಸ್ಟ್ 2023, 5:07 IST
(ಚಿತ್ರ ಕೃಪೆ: ಇಸ್ರೊ)
(ಚಿತ್ರ ಕೃಪೆ: ಇಸ್ರೊ)   

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿತು.

ಆ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.

ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದ್ದು, ಚಂದ್ರನ ಕಕ್ಷೆಗೆ ಅಂತಿಮ ಪರಿಚಲನೆಯು ಪೂರ್ಣಗೊಂಡಿದೆ (153 km x 163 km) ಎಂದು ಹೇಳಿದೆ.

ADVERTISEMENT

ಈಗ ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹಕ) ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ.

ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ.

ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.