ADVERTISEMENT

ಚಂದ್ರಯಾನ ಯಶಸ್ವಿಯಾದರೂ ರಾಹುಲ್‌ಯಾನ ಉಡ್ಡಯನ ಆಗಲಿಲ್ಲ : ರಾಜನಾಥ್‌ ಸಿಂಗ್‌

ಪಿಟಿಐ
Published 4 ಸೆಪ್ಟೆಂಬರ್ 2023, 12:25 IST
Last Updated 4 ಸೆಪ್ಟೆಂಬರ್ 2023, 12:25 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌   

ಜೈಸಲ್ಮೇರ್‌ : ಚಂದ್ರಯಾನ ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಯಿತು. ಆದರೆ ರಾಹುಲ್‌ಯಾನ ಮಾತ್ರ ಉಡ್ಡಯನವೂ ಆಗಲಿಲ್ಲ, ಇಳಿಯಲು ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಾಹುಲ್‌ ಗಾಂಧಿ ಅವರನ್ನು ಲೇವಡಿ ಮಾಡಿದರು.

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ರಾಜನಾಥ್‌ ಸಿಂಗ್‌, ಮೂರನೇ ಸುತ್ತಿನ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ಸನಾತನ ಧರ್ಮ ಕುರಿತ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

‘ಡಿಎಂಕೆ ನಾಯಕ ಸನಾತನ ಧರ್ಮಕ್ಕೆ ಅವಹೇಳನ ಮಾಡಿದರೂ ಕಾಂಗ್ರೆಸ್‌ ನಾಯಕರು ಮಾತನಾಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಶೋಕ್‌ ಗೆಹಲೋತ್‌ ಈ ವಿಷಯದಲ್ಲಿ ಮೌನವಹಿಸಿರುವುದೇಕೆ? ಸನಾತನ ಧರ್ಮದ ಬಗ್ಗೆ ಅವರ ಅಭಿಪ್ರಾಯವೇನು ಎಂದು ಕೇಳಬಯಸುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.

ADVERTISEMENT

‘ಸನಾತನ ಧರ್ಮವು ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುತ್ತದೆ. ‘ಇಂಡಿಯಾ’ ಮೈತ್ರಿಕೂಟದ ಪ್ರತಿಯೊಬ್ಬ ಸದಸ್ಯರು ಈ ಕುರಿತು ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಈ ದೇಶ ಅವರನ್ನು ಕ್ಷಮಿಸುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.