ADVERTISEMENT

ಪ್ರಾಸಿಕ್ಯೂಟರ್‌ ವಿರುದ್ಧ ಆರೋಪ

ಬಿಡದಿಯ ನಿತ್ಯಾನಂದ ವಿರುದ್ಧದ ಅತ್ಯಾಚಾರ ಪ್ರಕರಣ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 20:30 IST
Last Updated 9 ಡಿಸೆಂಬರ್ 2019, 20:30 IST
   

ಬೆಂಗಳೂರು: ‘ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಅವರನ್ನು ಕೋರ್ಟ್‌ಗೆ ಹಾಜರಾಗುವಂತೆ ಪ್ರಯತ್ನಿ ಸುವ ಬದಲಿಗೆ ಪ್ರಾಸಿಕ್ಯೂಷನ್‌ ನನ್ನ ವಿರುದ್ಧವೇ ಪ್ರತಿಕೂಲ ಕ್ರಮ ಕೈಗೊಳ್ಳುತ್ತಿದೆ’ ಎಂದು ಪ್ರಕರಣದ ದೂರುದಾರ ಕೆ. ಲೆನಿನ್‌ ಹೈಕೋರ್ಟ್‌ಗೆ ದೂರಿದ್ದಾರೆ.

‘ಸೆಷನ್ಸ್ ಕೋರ್ಟ್‌ನಲ್ಲಿ ನಡೆಯು ತ್ತಿರುವ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ದೂರುದಾರ ಕೆ. ಲೆನಿನ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯ ಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಲೆನಿನ್‌ ಪರ ವಕೀಲರು, ‘ವಿಚಾರಣೆಗೆ ನಿತ್ಯಾನಂದ ಸ್ವಾಮೀಜಿಯನ್ನು ಈತನಕ ಹಾಜರುಪಡಿಸಿಲ್ಲ. ಬದಲಿಗೆ ಸಾಕ್ಷಿದಾರರಿಗೇ ವಾರಂಟ್ ಹೊರಡಿಸಲಾಗುತ್ತಿದೆ. ವಾರಂಟ್‌ ರಿಕಾಲ್‌ ಮಾಡಿಕೊಳ್ಳಲು ಪ್ರಾಸಿಕ್ಯೂಟರ್‌ ಸಹಕರಿಸುತ್ತಿಲ್ಲ’ ಎಂದು ದೂರಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ರಾಮನಗರ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್ ವಿರುದ್ಧ ದೂರುದಾರ ಮಾಡಿರುವ ಆರೋಪಗಳ ಬಗ್ಗೆ ವಿವರಣೆ ನೀಡಿ’ ಎಂದು ರಾಜ್ಯ ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.

ಸಮ್ಮತಿ: ಅತ್ಯಾಚಾರ ಆರೋಪ

ಪ್ರಕರಣದಲ್ಲಿ ಗೈರು ಹಾಜರಿಗೆ ಕೋರಿ ನಿತ್ಯಾನಂದ ಸ್ವಾಮೀಜಿ ಸಲ್ಲಿಸಿದ್ದ ಮನವಿಗೆ ರಾಮನಗರದ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ ಸೋಮವಾರ ಸಮ್ಮತಿಸಿದೆ.

ಪ್ರಕರಣದ ಮೊದಲ ಆರೋಪಿ ನಿತ್ಯಾನಂದ ಸ್ವಾಮೀಜಿ ಖುದ್ದು ಹಾಜರಿಗೆ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ವಿನಾಯಿತಿ ನೀಡಿದ್ದು, ವಿಚಾರಣೆಯನ್ನು ಮಂಗಳವಾರಕ್ಕೆ (ಡಿ.10) ಮುಂದೂಡಿದರು.

ಪ್ರಕರಣದ ಪ್ರಮುಖ ಸಾಕ್ಷಿ ಲೆನಿನ್‌ ಮತ್ತು ನಿತ್ಯಾನಂದ ಪರ ವಕೀಲರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.