ರಾಯಪುರ: ಛತ್ತೀಸ್‌ಗಢ ನಿಯೋಜಿತ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲ ವಿಶ್ವಭೂಷಣ ಹರಿಚಂದನ್ ಅವರನ್ನು ಭೇಟಿ ಮಾಡಿರುವ ವಿಷ್ಣುದೇವ್ ಸಾಯ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಇಂದು ನಡೆದ ಪಕ್ಷದ ಶಾಸಕರ ಸಭೆಯಲ್ಲಿ ವಿಷ್ಣುದೇವ್ ಸಾಯ್ ಅವರನ್ನು ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲಾಯಿತು.
90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ ಗೆಲುವು ಸಾಧಿಸುವ ಅಧಿಕಾರ ಹಿಡಿದಿದೆ. ಇಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನಷ್ಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.