ರಾಯ್‌ಪುರ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸ್‌ಗಡದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಟುಟೇಜಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಯಶ್ ಟುಟೇಜಾ ಅವರೊಂದಿಗೆ ಹೇಳಿಕೆ ದಾಖಲಿಸಲು ಶನಿವಾರ ಹೋಗಿದ್ದಾಗ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು)/ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ರಾಯ್‌ಪುರದ ಕಚೇರಿಯಲ್ಲಿ ಮಾಜಿ ಐಎಎಸ್ ಅಧಿಕಾರಿಯನ್ನು ಬಂಧಿಸಲಾಯಿತು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಟುಟೇಜಾರನ್ನು ಬಂಧಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ವಿನಂತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2003 ಬ್ಯಾಚ್‌ನ ಮಾಜಿ ಐಎಎಸ್ ಅಧಿಕಾರಿ ಅನಿಲ್ ಟುಟೇಜಾ ಅವರು ಕಳೆದ ವರ್ಷ ಕರ್ತವ್ಯದಿಂದ ನಿವೃತ್ತಿ ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.