ರಾಯಪುರ/ಐಜ್ವಾಲ್: ಛತ್ತೀಸಗಢ ಮತ್ತು ಮಿಜೋರಾಂ ವಿಧಾನಸಭೆಗೆ ಮಂಗಳವಾರ ಮತದಾನ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 25,249 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 25 ಮಹಿಳೆಯರು ಸೇರಿದಂತೆ 223 ಅಭ್ಯರ್ಥಿಗಳ ಭವಿಷ್ಯವನ್ನು 40,78,681 ಮತದಾರರು ನಿರ್ಧರಿಸಲಿದ್ದಾರೆ. 5,304 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮಿಜೋರಾಂ ವಿಧಾನಸಭೆಯ 40 ಸ್ಥಾನಗಳಿಗೆ ಸ್ಪರ್ಧಿಸಿರುವ 174 ಅಭ್ಯರ್ಥಿಗಳ (18 ಮಹಿಳೆಯರು) ಭವಿಷ್ಯವನ್ನು ನಿರ್ಧರಿಸಲು 8.57 ಲಕ್ಷಕ್ಕೂ ಹೆಚ್ಚು ಮತದಾರರು ಸಜ್ಜಾಗಿದ್ದಾರೆ. 1,276 ಮತಗಟ್ಟೆ ಸ್ಥಾಪಿಸಲಾಗಿದೆ.
ಆಡಳಿತಾರೂಢ ಮಿಜೊ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷ ಝೆಡ್‌ಪಿಎಂ 40 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿ ಮತ್ತು ಎಎಪಿ ಕ್ರಮವಾಗಿ 23 ಮತ್ತು 4 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ. 27 ಪಕ್ಷೇತರರು ಕಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.