ADVERTISEMENT

ನಕ್ಸಲ್‌ ನಿಗ್ರಹ ಕಾರ್ಯಾಚರಣೆ: ಮಗು ಸಾವು

ಪಿಟಿಐ
Published 2 ಜನವರಿ 2024, 0:28 IST
Last Updated 2 ಜನವರಿ 2024, 0:28 IST
<div class="paragraphs"><p>ಸಾವು –ಪ್ರಾತಿನಿಧಿಕ ಚಿತ್ರ</p></div>

ಸಾವು –ಪ್ರಾತಿನಿಧಿಕ ಚಿತ್ರ

   

ರಾಯಪುರ: ಛತ್ತೀಸಗಡದ ಬಿಜಾಪುರದಲ್ಲಿ ಸೋಮವಾರ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ತಿಂಗಳ ಮಗು ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮಟ್ವಂಡಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಮೀಸಲು ಪಡೆಯು ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಹೆಣ್ಣು ಮಗು ಗುಂಡಿಗೆ ಬಲಿಯಾಗಿದ್ದು, ಮಗುವಿನ ತಾಯಿ ಮತ್ತು ಇಬ್ಬರು ಯೋಧರು ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.