ರಾಯಪುರ(ಪಿಟಿಐ): ಛತ್ತೀಸಗಢದ ಬಸ್ತರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ನಕ್ಸಲರು ಕೊರೆದ 70 ಮೀ. ಉದ್ದದ ಸುರಂಗವನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ.
ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಂಗ ಪತ್ತೆಯಾಗಿದ್ದು, ನಕ್ಸಲರು ಇದನ್ನು ಬಂಕರ್‌ನಂತೆ ಬಳಸಿಕೊಂಡಿರುವ ಸಾಧ್ಯತೆ ಇದೆ ಎಂದು ದಾಂತೇವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ. ಬರ್ಮನ್ ಬುಧವಾರ ತಿಳಿಸಿದರು.
ತೊಡೊಪತ್ ಉಸ್ಪರಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯ ನಡೆಸುತ್ತಿದ್ದಾಗ ಆರು ಅಡಿ ಆಳದ ಸುರಂಗ ಪತ್ತೆಯಾಗಿದೆ ಎಂದು ವಿವರಿಸಿದರು.
ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬಳಿಕ ನಕ್ಸಲರು ಪರಾರಿಯಾಗಿದ್ದಾರೆ ಎಂದರು.
ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ನ ಮೂವರು ಯೋಧರು ಹುತಾತ್ಮರಾಗಿ, 15 ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.