ADVERTISEMENT

ಛತ್ತೀಸ್‌ಗಡ: ನಕ್ಸಲರ ಜೊತೆ ಗುಂಡಿನ ಚಕಮಕಿ, ಮೂವರು ಪೊಲೀಸರು ಹುತಾತ್ಮ

ಪಿಟಿಐ
Published 25 ಫೆಬ್ರುವರಿ 2023, 11:21 IST
Last Updated 25 ಫೆಬ್ರುವರಿ 2023, 11:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸುಕ್ಮಾ: ಛತ್ತೀಸ್‌ಗಡ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಸಶಸ್ತ್ರಪಡೆ ಪೊಲೀಸರು ಹಾಗೂ ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಶನಿವಾರ ಮೂವರು ಪೊಲೀಸರು ಹುತಾತ್ಮರಾಗಿದ್ದಾರೆ.

ಘಟನೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಮುರಾಮ್ ನಾಗ್, ಕಾನ್‌ಸ್ಟೆಬಲ್‌ಗಳಾದ ಕುಂಜ್ರಾ ಮೋಗ ಮತ್ತು ವಂಜಮ್‌ ಭೀಮ ಹುತಾತ್ಮರಾಗಿದ್ದಾರೆ ಎಂದು ಸಿಆರ್‌ಪಿಎಫ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಇಲ್ಲಿನ ಜಗರಗುಂಡ ಹಾಗೂ ಕುಂಡೆಡ್ ಗ್ರಾಮಗಳ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಸಶಸ್ತ್ರಪಡೆ ಪೊಲೀಸರು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರು, ಭದ್ರತಾ ಪಡೆ ಯೋಧರು, ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ಮೂವರು ಪೊಲೀಸರು ಮೃತರಾಗಿದ್ದಾರೆ.

ಈ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.