ADVERTISEMENT

ಮಕ್ಕಳ ಅಶ್ಲೀಲ ಚಿತ್ರಗಳ ಜಾಲ: ಎನ್​ಆರ್​ಐ ವಿರುದ್ಧ ಪ್ರಕರಣ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2022, 10:22 IST
Last Updated 3 ಡಿಸೆಂಬರ್ 2022, 10:22 IST
ಸಿಬಿಐ
ಸಿಬಿಐ   

ಚೆನ್ನೈ: ಮಕ್ಕಳ ಅಶ್ಲೀಲ ಚಿತ್ರಗಳ ವೆಬ್‌ಸೈಟ್‌ ನಡೆಸುತ್ತಿದ್ದ ಅನಿವಾಸಿ ಭಾರತೀಯ(ಎನ್​ಆರ್​ಐ) ರಾಜ ಸುಬ್ರಮಣಿಯನ್ ಆಲಿಯಾಸ್ ಸ್ಯಾಮ್ ಜಾನ್ಸ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಸದ್ಯರಾಜ ಸುಬ್ರಮಣಿಯನ್ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದಾನೆ. ತಮಿಳುನಾಡಿನ ತಿರುಚ್ಚಿಯಲ್ಲಿರುವ ಆತನಮನೆಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳು, ಹಾರ್ಡ್ ಡಿಸ್ಕ್, ಲ್ಯಾಪ್ಟಾಪ್ ಮತ್ತು ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಜರ್ಮನಿಯಗುಪ್ತಚರದಳದ ಅಧಿಕಾರಿಗಳ ನೆರವಿನೊಂದಿಗೆ ಸಿಬಿಐ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. ಹಾಗೂರಾಜ ಸುಬ್ರಮಣಿಯನ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ರಾಜ ಸುಬ್ರಮಣಿಯನ್ ಜರ್ಮನಿಯಲ್ಲಿ ತಲೆ ಮರೆಸಿಕೊಂಡಿದ್ದಾನೆ. ಈ ಬಗ್ಗೆ ಜರ್ಮನಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.